ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ಕೊಟ್ಟಿಲ್ಲ: ಪ್ರೂಫ್‌ ಕೇಳಿದ ಕಾಂಗ್ರೆಸ್‌ ನಾಯಕ

Jan 24, 2023, 2:14 PM IST

2016ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೋಮವಾರ ಪ್ರಶ್ನೆಗಳನ್ನು ಎತ್ತಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ನೀಡಿಲ್ಲ ಎಂದು ಕೈ ನಾಯಕ ಜಮ್ಮುವಿನಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ಬಹಳ ಕೊಚ್ಚಿಕೊಳ್ಳುತ್ತದೆ, ಅಷ್ಟೆಲ್ಲಾ ಜನರನ್ನು ಕೊಂದಿದ್ದೇವೆ ಎಂದು ಹೇಳುತ್ತದೆ. ಆದರೆ, ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಟೀಕೆ ಮಾಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಹೊರತಾಗಿ, 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ದಿಗ್ವಿಜಯ್ ಪ್ರಧಾನಿಯ ಪ್ರಶ್ನೆ ಮಾಡಿದ್ದಾರೆ. ಪುಲ್ವಾಮಾ ದಾಳಿಯ ಸಂದರ್ಭದಲ್ಲಿ, ಸಿಆರ್‌ಪಿಎಫ್ ಅಧಿಕಾರಿಗಳು ಸೈನಿಕರನ್ನು ವಿಮಾನದ ಮೂಲಕ ಸ್ಥಳಾಂತರಿಸಬೇಕೆಂದು ಹೇಳಿದ್ದರು. ಆದರೆ ಪ್ರಧಾನಿ ಇದಕ್ಕೆ ಒಪ್ಪಿರಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೇಳಿದ್ದಾರೆ. 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ದಾಳಿಯ ಹೊಣೆ ಹೊತ್ತುಕೊಂಡಿತ್ತು.