Nov 28, 2021, 1:32 PM IST
ನವದೆಹಲಿ (ನ. 28): ಡೆಲ್ಟಾ ವೈರಸ್‌ಗಿಂತಲೂ (Delta Variant) ಅತ್ಯಂತ ಅಪಾಯಕಾರಿಯಾದ, ವೇಗವಾಗಿ ಹಬ್ಬುವ ಹಾಗೂ ಯಾವುದೇ ಲಸಿಕೆಗೂ ಬಗ್ಗದ ‘ಬೋಟ್ಸ್‌ವಾನಾ’ (ಒಮಿಕ್ರೋನ್) ಕೋವಿಡ್ ರೂಪಾಂತರಿ ಬಗ್ಗೆ (Omicron variant) ಭಾರತದಲ್ಲೂ ತಲ್ಲಣ ಕಾಣಿಸಿಕೊಂಡಿದೆ.
Omicron Variant: ಹೆಚ್ಚುತ್ತಿದೆ ಓಮಿಕ್ರಾನ್ ಭೀತಿ 3 ಜಿಲ್ಲೆ ಸೇರಿ ಕರ್ನಾಟಕದಲ್ಲಿ ಹೈ ಅಲರ್ಟ್!
ಈ ಹಿನ್ನೆಲೆಯಲ್ಲಿ ತಕ್ಷಣವೇ ಮುಂಜಾಗ್ರತಾ ಕ್ರಮ ಜರುಗಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, (PM Modi) ‘ಈ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಡಬೇಕು. ವಿದೇಶದಿಂದ ಬರುವವರ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಬೇಕು. ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಪುನಾರಂಭ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಮಹತ್ವದ ಸೂಚನೆ ನೀಡಿದ್ದಾರೆ. ‘ಒಮಿಕ್ರೋನ್’ ಸೇರಿ ವಿವಿಧ ಕೋವಿಡ್ ತಳಿಗಳು ತಾಂಡವವಾಡುತ್ತಿರುವ 12 ‘ಹೈರಿಸ್ಕ್’ ದೇಶಗಳಿಂದ ಬಂದವರ ಮೇಲೆ ನಿಗಾಗೆ ಕೇಂದ್ರ ನಿರ್ಧರಿಸಿದೆ. ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸ್‌ವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಾಪುರ, ಹಾಂಕಾಂಗ್, ಇಸ್ರೇಲ್ ಹಾಗೂ ಬ್ರಿಟನ್ ಸೇರಿದಂತೆ ಐರೋಪ್ಯ ಒಕ್ಕೂಟವನ್ನು ಭಾರತ ‘ಹೈ ರಿಸ್ಕ್’ ದೇಶಗಳು ಎಂದು ಪಟ್ಟಿಮಾಡಿದೆ. ಈ ದೇಶಗಳಿಂದ ಕಳೆದ 2 ವಾರಗಳಿಂದ ಬಂದವರ ಮೇಲೆ ನಿಗಾ ಇಡಲಾಗುತ್ತದೆ.