ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳು, ನಗರಗಳಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹಬ್ಬದ ವೇಳೆ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ಬೆಂಗಳೂರು (ನ. 09): ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳು, ನಗರಗಳಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹಬ್ಬದ ವೇಳೆ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ಯಾವ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದ್ದು, ವಾಯುಮಾಲಿನ್ಯ ಕಡಿಮೆ ಇರುವುದೋ ಅಂತಹ ನಗರಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ದೆಹಲಿಯಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಜನರು ಅನಾರೋಗ್ಯದಿಂದ ಹೈರಾಣಾಗಿದ್ದಾರೆ. ಹೀಗಾಗಿ ಅಲ್ಲಿ ಪಟಾಕಿಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ.