ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಸಂಭ್ರಮ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ ‘ಅಮೃತದ ಸಿಹಿ’ಯನ್ನು ಎಲ್ಲರಿಗೂ ಹಂಚಿದ್ದಾರೆ.
ನವದೆಹಲಿ(ಆ.15): ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿದಸಾಸಿದ ಸ್ವಾತಂತ್ರ್ಯದ ಸಂಭ್ರಮ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ ‘ಅಮೃತದ ಸಿಹಿ’ಯನ್ನು ಎಲ್ಲರಿಗೂ ಹಂಚಿದ್ದಾರೆ.
ಇನ್ನು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮುಂದಿನ ಇಪ್ಪತ್ತೈದು ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿಯತ್ತ ಸಾಗಿಸುವ ಸಂಕಲ್ಪ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪರಿಶ್ರಮ ಹಾಗೂ ಪ್ರಯತ್ನದಿಂದ ಈ ಸಂಕಲ್ಪ ಸಾಧಿಸಬಹುದು. ನೂರನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ವೇಳೆ ನಾವು ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುವಂತಹ ಸಾಧನೆ ಮಾಡಬೇಕು. ಇಂತಹುದ್ದೊಂದು ಸಂಕಲ್ಪ ಮಾಡಿ ಮುನ್ನಡೆದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹೇಳಿದ್ದಾರೆ.