Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Published : Dec 24, 2021, 04:14 PM ISTUpdated : Dec 24, 2021, 04:21 PM IST

ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ.

ಬೆಂಗಳೂರು (ಡಿ. 24): ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.  ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ. 12 ಮಂದಿಯಲ್ಲಿ ಇಬ್ಬರು ಬಾಲಕಿಯರೂ ಇದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ರೂಪಾಂತರಿ ಸೋಂಕಿತರ ಒಟ್ಟು ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಶಾದ್ಯಂತ ಒಮಿಕ್ರೋನ್ ಹೆಚ್ಚುತ್ತಿದ್ದು, ವೈರಸ್ ನಿರ್ವಹಣೆಗೆ ರಾಜ್ಯಗಳಿಗೆ ಸಕಲ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 

ದೇಶದಾದ್ಯಂತ ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಗುರುವಾರದಿಂದಲೇ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದ್ದಾರೆ.  ಅಮೆರಿಕಾ, ಯುರೋಪ್‌ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದಕ್ಕೆ ಡೆಲ್ಮಿಕ್ರೋನ್‌ ಕಾರಣ ಎಂದು ಹೇಳಲಾಗುತ್ತಿದೆ. ಕೋವಿಡ್‌ನ ರೂಪಾಂತರಿಗಳಾದ ಡೆಲ್ಟಾ ಮತ್ತು ಒಮಿಕ್ರೋನ್‌ಗಳನ್ನು ಸೇರಿಸಿ ಈ ಹೊಸ ಪದವನ್ನು ಸೃಷ್ಟಿಮಾಡಲಾಗಿದೆ. ಇನ್ನು ಫೆಬ್ರವರಿ ಅಂತ್ಯದೊಳಗೆ 3 ನೇ ಅಲೆ ಪಕ್ಕಾ ಎಂದು ಕಾನ್ಪುರ ಐಐಟಿ ತಜ್ಞರು ಎಚ್ಚರಿಸಿದ್ದಾರೆ. 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more