ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

Published : Sep 04, 2023, 11:45 AM IST

ಒಂದೇ ಸಲ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಸುವ ಲೆಕ್ಕಾಚಾರ
ಚುನಾವಣೆ ವೆಚ್ಚವನ್ನೂ ತಗ್ಗಿಸುವ ಉದ್ದೇಶದಿಂದ 1983ರಲ್ಲಿ ಪ್ರಸ್ತಾಪ..!
1983 ರಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಈ ಬಗ್ಗೆ ಪಸ್ತಾವನೆ..!
 

ಕೇಂದ್ರ ಸರ್ಕಾರದ ದೇಶಕ್ಕೊಂದೇ ಚುನಾವಣೆ ಚಿಂತನೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದು ಒಕ್ಕೂಟ ವ್ಯವಸ್ಥೆಯ ಕಗ್ಗೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಸೇರಿದಂತೆ ಇಂಡಿಯಾ(I.N.D.I.A) ಕೂಟದ ನಾಯಕರು ಸಹ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ದೇಶಕ್ಕೊಂದೇ ಚುನಾವಣೆ ಬಗ್ಗೆ ಸಚಿವ ಅನುರಾಗ್ ಠಾಕೂರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಒಂದು ರಾಷ್ಟ್ರ ಒಂದು ತೆರಿಗೆ(One nation one tax) ಪದ್ಧತಿಗೆ ವಿಪಕ್ಷಗಳು ವಿರೋಧಿಸಿದ್ದವು, ಆದ್ರೆ ಇಂದು ದಾಖಲೆ ಪ್ರಮಾಣದಲ್ಲಿ ಜಿಎಸ್‌ಟಿ(GST) ಸಂಗ್ರಹ ಆಗುತ್ತಿದೆ. ಅದೇ ರೀತಿ ದೇಶಕ್ಕೊಂದೇ ಚುನಾವಣೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಅವರು ಅವಧಿ ಪೂರ್ವ ಲೋಕಸಭೆ ಚುನಾವಣೆ ವದಂತಿ ತಳ್ಳಿಹಾಕಿದ್ದಾರೆ. ಕೇಂದ್ರ ಸರ್ಕಾರ ಸಂಪೂರ್ಣ ಅವಧಿ ಪೂರೈಸಲಿದೆ ಎಂದ ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!