Election Result ಯುಪಿ ಚುನಾವಣೆಯಲ್ಲಿ ಸ್ಪರ್ಧಿಸಿದ 399 ಸ್ಥಾನಗಳ ಪೈಕಿ 387ರಲ್ಲಿ ಠೇವಣಿ ಕಳೆದುಕೊಂಡ ಕಾಂಗ್ರೆಸ್!

Mar 12, 2022, 6:05 PM IST

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದತ್ತ ಇಡೀ ದೇಶವೆ ಚಿತ್ತ ನೆಟ್ಟಿತ್ತು. ಈ ಬಾರಿಯ ಯುಪಿ ಚುನಾವಣೆಗೆ ಸ್ಪರ್ಧಿಸಿದ ಶೇಕಡಾ 80 ರಷ್ಟು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ 399 ಸ್ಥಾನಗಳಿಗೆ ಸ್ಪರ್ಧಿಸಿತ್ತು. ಇದರಲ್ಲಿ 387 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. 403 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಎಸ್‌ಪಿ 290 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿದೆ. ಇನ್ನು ಬಿಜಪಿಯ ಕೆಲ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.