ಏಷ್ಯಾನೆಟನ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಭೂತಪೂರ್ವ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿನ ಬರ ಪರಿಹಾರ ಕುರಿತು ಕಾಂಗ್ರಸ್ ಕಾನೂನು ಹೋರಾಟ, ತೆರಿಗೆ ಅನ್ಯಾಯ ಕುರಿತ ಆರೋಪ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ ಸೇರಿದಂತೆ ಮೋದಿ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.
ನವದೆಹಲಿ(ಏ.20) ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿ ದೇಶದ ಉದ್ದಗಲ ಪ್ರಚಾರದಲ್ಲಿ ನಿರತವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ತಮ್ಮ ಗೆಲುವಿನ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಹಲವು ಆರೋಪಗಳಿಗೆ ಮೋದಿ ಉತ್ತರಿಸಿದ್ದಾರೆ. ಈ ಪೈಕಿ ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಮಾತನಾಡಿದ್ದಾರೆ. ದಕ್ಷಿಣ ಭಾರತ- ಉತ್ತರ ಭಾರತ, ದೇಶ ವಿಭಜನೆ ಹೇಳಿಕೆಗೂ ಮೋದಿ ಉತ್ತರಿಸಿದ್ದಾರೆ. ಮೋದಿ ವಿಶೇಷ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.