40 ಕೆಜಿ ಬೆಳ್ಳಿ ಇಟ್ಟಿಗೆ, 300 ಕೋಟಿ ಯೋಜನೆ, 10 ಕೋಟಿ ಜನರಿಂದ ದೇಣಿಗೆ; ನಿರ್ಮಾಣವಾಗಲಿದೆ ರಾಮಮಂದಿರ

Jul 22, 2020, 4:49 PM IST

ಲಕ್ನೋ (ಜು. 22):  ಆಗಸ್ಟ್‌ 5ರಂದು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವುದು ಖಚಿತವಾಗುತ್ತಿದ್ದಂತೆಯೇ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭವಾಗಿವೆ. ಸುಮಾರು 250 ಅತಿಥಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು 5 ಬೆಳ್ಳಿ ಇಟ್ಟಿಗೆಗಳನ್ನು ಸಾಂಕೇತಿಕವಾಗಿ ಇರಿಸಿ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಮಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಹಿರಿಯ ಬಿಜೆಪಿ ಮುಖಂಡ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಸಾಧ್ವಿ ಋುತಾಂಬರಾ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಅಮಿತ್‌ ಶಾ, ರಾಜನಾಥ ಸಿಂಗ್‌ ಸೇರಿ ಕೆಲವು ಕೇಂದ್ರ ಮಂತ್ರಿಗಳು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಅವರ ಸಂಪುಟದ ಸಚಿವರು ಆಗಮಿಸುವ ನಿರೀಕ್ಷೆಯಿದೆ. ರಾಮಮಂದಿರದ ವಿಶೇಷತೆಗಳೇನು? ಇಲ್ಲಿದೆ ನೋಡಿ..!

ಬೆಳ್ಳಿ ಇಟ್ಟಿಗೆ ಇರಿಸಿ ರಾಮಮಂದಿರಕ್ಕೆ ಮೋದಿ ಶಂಕು: ಕಾರ್ಯಕ್ರಮಕ್ಕೆ ಭರದ ಸಿದ್ಧತೆ!