ಮತ್ತೆ ಲಾಕ್‌ಡೌನ್‌ ಮಾಡಲು ಪ್ರಧಾನಿ ಮೋದಿ ಚಿಂತಿಸಿದ್ದಾರಾ?

Jun 13, 2020, 11:08 PM IST

ನವದೆಹಲಿ, (ಜೂನ್.13): ದೇಶದಲ್ಲಿ ಕೊರೋನಾ ಕಂಟ್ರೋಲ್‌ಗೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಲಾಕ್‌ಡೌನ್ ಘೋಷಣೆಯಾಗುತ್ತಾ ಎನ್ನುವ ಸುದ್ದಿ ಹರಿದಾಡುತ್ತಿದೆ.

ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ: ಮತ್ತೆ ಲಾಕ್‌ಡೌನ್ ಆಗುತ್ತಾ?

ಹೌದು.... ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಭೆ ನಡೆಸಿರುವುದು, ಇನ್ನೆರಡು ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿರುವುದು ನೋಡಿದ್ರೆ, ಮತ್ತೊಮ್ಮೆ ದಿಢೀರ್ ಲಾಕ್‌ಡೌನ್‌ ಘೋಷಣೆ ಮಾಡಲು ತಯಾರಿ ನಡೆಸಿದ್ದಾರಾ? ಎನ್ನುವ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.