May 18, 2020, 1:14 PM IST
ನವದೆಹಲಿ(ಮೇ.18): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್ ಬಿಸಿ ಭಾರತಕ್ಕೆ ಬಲವಾಗಿಯೇ ತಟ್ಟಿದೆ. ಕೋವಿಡ್ 19 ಹೆಮ್ಮಾರಿಯಿಂದಾಗಿ ದೇಶದಲ್ಲಿ 12 ಕೋಟಿ ಮಂದಿ ಬಡತನದ ಕೂಪಕ್ಕೆ ಬೀಳಲಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಸದ್ಯ ದೇಶದಲ್ಲಿ ಕೊರೋನಾ ನಿಯಂತ್ರಣವೇ ಸವಾಲಾಗಿ ಪರಿಣಮಿಸಿದೆ. ಇನ್ನು ಕೊರೋನಾ ನಂತರದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಲಾಕ್‌ಡೌನ್ ಹಾಗೂ ಕೊರೋನಾ ವೈರಸ್‌ನಿಂದಾಗಿ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.
ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?
ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.35ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗುತ್ತಿದೆ. ದೇಶದಲ್ಲಿ ಸುಮಾರು 13.5 ಕೋಟಿ ಮಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.