2022ರೊಳಗೆ 36 ರಫೇಲ್‌ ಯುದ್ಧ ವಿಮಾನಗಳು ವಾಯುಪಡೆ ಬತ್ತಳಿಕೆಗೆ

Jun 20, 2021, 9:29 AM IST

ಬೆಂಗಳೂರು (ಜೂ. 20): 2022 ರ ವೇಳೆಗೆ 36 ರಫೇಲ್‌ ಯುದ್ಧ ವಿಮಾನಗಳು ಭಾರತದ ವಾಯುಪಡೆಯ ಬತ್ತಳಿಕೆಗೆ ಸೇರ್ಪಡೆಯಾಗಲಿವೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ರಾಕೇಶ್‌ ಕುಮಾರ್‌ ಸಿಂಗ್‌ ಭದೌರಿಯಾ ತಿಳಿಸಿದ್ದಾರೆ.

ಭಾರೀ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

2016 ರಲ್ಲಿ 59 ಸಾವಿರ ಕೋಟಿ ರು. ವೆಚ್ಚದಲ್ಲಿ 36 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಭಾರತವು ಫ್ರಾನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅದರಂತೆ 2022ರ ವೇಳೆಗೆ ರಫೇಲ್‌ ಯುದ್ಧ ವಿಮಾನಗಳು ಭಾರತದ ಬತ್ತಳಿಕೆಗೆ ಸೇರ್ಪಡೆಯಾಗಲಿವೆ ಎಂದು ರಾಕೇಶ್ ಕುಮಾರ್ ಹೇಳಿದ್ದಾರೆ.