ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ.
ಬೆಂಗಳೂರು (ಫೆ. 26): ದೇಶದ ಕೊರೋನಾ ಹಾಟ್ಸ್ಪಾಟ್ ಎಂಬ ಕುಖ್ಯಾತಿಗೆ ಕಾರಣವಾಗಿದ್ದ ಮಹಾರಾಷ್ಟ್ರದಲ್ಲಿ ಹೊಸದಾಗಿ 8807 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಗರಿಷ್ಠ ಸೋಂಕಿನ ಪ್ರಮಾಣ ಇದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ. ಸದ್ಯ ದೇಶದಲ್ಲಿ ಅತಿಹೆಚ್ಚಿನ ಸೋಂಕು ಕಂಡುಬರುತ್ತಿರುವ ಮಹಾರಾಷ್ಟ್ರ, ಕೇರಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್, ಕರ್ನಾಟಕ, ಪಂಜಾಬ್, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ತಜ್ಞರ ತಂಡ ನಿಯೋಜಿಸಲಾಗಿದೆ.