ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ.
ಬೆಂಗಳೂರು (ಅ. 17): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. ಕಟ್ಟಡಗಳು ನೆಲ ಸಮವಾಗಿವೆ. ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆಯಲ್ಲಿ ನುಗ್ಗಿದ ನೀರಿನಲ್ಲಿ ಜನರೂ ಕೂಡಾ ಕೊಚ್ಚಿ ಹೋಗಿದ್ದಾರೆ. ಇನ್ನು ಮಹಾರಾಷ್ಟ್ರದ ಸ್ಥಿತಿಯೇನೂ ಭಿನ್ನವಾಗಿಲ್ಲ. ಅಲ್ಲಿಯೂ ಕೂಡಾ ಅಪಾರ ಹಾನಿಯಾಗಿದೆ. ನಷ್ಟ ಉಂಟಾಗಿದೆ.
ಇನ್ನು ಕರ್ನಾಟಕದ ವಿಚಾರಕ್ಕೆ ಬರುವುದಾದರೆ ಉತ್ತರ ಕರ್ನಾಟಕ ಭಾಗ ಅಕ್ಷರಶಃ ನಲುಗಿ ಹೋಗಿದೆ. ಅಪಾರ ಪ್ರಮಾಣದ ನಷ್ಟವುಂಟಾಗಿದೆ.