ಬೆಂಗಳೂರು(ಮಾ.29): ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿರುವ ಬಿಜೆಪಿ ಇದೀಗ ಕರ್ನಾಟಕದತ್ತ ಬಿಜೆಪಿ ಚಿತ್ತ ನೆಟ್ಟಿದೆ. ಮಾರ್ಚ್ 31ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗೆ ಗರಿಗೆದರಿದೆ.