Uttar Pradesh Elections ಹೂವು ಮಾರಿ ಜೀವನ ಸಾಗಿಸುವ ಯೋಗಿ ಆದಿತ್ಯನಾಥ್ ಸಹೋದರಿ

Mar 4, 2022, 9:45 PM IST

ಬೆಂಗಳೂರು (ಮಾ.4): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ (Uttar Pradesh Elections) ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮಾರ್ಚ್ 10ಕ್ಕೆ ಹೊರಬೀಳಲಿರುವ ಫಲಿತಾಂಶದ (Election Results)ಬಗ್ಗೆ ಎಲ್ಲರ ಗಮನ ನೆಟ್ಟಿದೆ. ಅದರಲ್ಲೂ ದೇಶದ ಪ್ರಮುಖ ರಾಜ್ಯ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ (yogi adityanath) ಯಶಸ್ಸು ಕಾಣ್ತಾರಾ ಎನ್ನುವ ಪ್ರಶ್ನೆಗೆ ಇನ್ನೇನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಕಣಕ್ಕೆ ಇಳಿದಿರುವ ಯೋಗಿ ಆದಿತ್ಯನಾಥ್, ಗೋರಖ್ ಪುರದಿಂದ (Gorakh Pur) ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ಈ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಈ ನಡುವೆ ಯೋಗಿ ಆದಿತ್ಯನಾಥ್ ವಿಚಾರದಲ್ಲಿ ಇನ್ನೊಂದು ವಿಶೇಷ ಸಂಗತಿ ಎಂದರೆ, ಅವರು ಮುಖ್ಯಮಂತ್ರಿಯಾಗಿದ್ದರೂ ಅವರ ಸಹೋದರಿ ಶಶಿ ದೇವಿ (Shashi Devi) ಋಷಿಕೇಶದಲ್ಲಿ ಹೂವಿನ ವ್ಯಾಪಾರ ಮಾಡುವ ಮೂಲಕ ಜೀವನ ಸಾಗಿಸುತ್ತಿರುವುದು.

ಸಣ್ಣಪುಟ್ಟ ರಾಜಕಾರಣಿ ಆದಲ್ಲಿಯೇ ಅವರ ಇಡೀ ಕುಟುಂಬ ಅದರ ಲಾಭ ಪಡೆದುಕೊಳ್ಳುವುದು ಒಂದೆಡೆಯಾಗಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರೂ ಯೋಗಿ ಆದಿತ್ಯನಾಥ್ ಅವರ ಸಹೋದರಿ ಹೂವಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿರುವುದು ವಿಶೇಷವೇ ಸರಿ.