ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿಯೂ ಆಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಬೆಂಗಳೂರು(ಮಾ.11): ಉತ್ತರಾಖಂಡದಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿಯೂ ಆಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಳಿಕ ಉತ್ತರಾಖಂಡದಲ್ಲಿ ಪಕ್ಷ 42-44 ಸ್ಥಾನ ಗೆಲ್ಲುವುದಾಗಿ ರಾಷ್ಟ್ರೀಯ ನಾಯಕರಿಗೆ ಲಿಖಿತವಾಗಿ ವರದಿ ನೀಡಿದ್ದೆ. ಅದರಂತೆ ಸ್ಪಷ್ಟಬಹುತದೊಂದಿಗೆ ಮತ್ತೆ ಅಧಿಕಾರ ಹಿಡಿದ್ದೇವೆ. ಈ ಫಲಿತಾಂಶದ ಬಗ್ಗೆ ನಮಗೆ ಯಾವುದೇ ಗೊಂದಲ ಇರಲಿಲ್ಲ. ಉತ್ತರಾಖಂಡದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿಶ್ವಾಸವಿತ್ತು. ಇದರ ಜತೆಗೆ ಒಳ್ಳೆಯ ತಂತ್ರಗಳೊಂದಿಗೆ ಈ ಚುನಾವಣೆ ಎದುರಿಸಿದ್ದೆವು ಎಂದರು.