Yogi Adityanath: ಪ್ರಮಾಣ ವಚನಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಇಕಾನಾ ಸ್ಟೇಡಿಯಂ ಸಜ್ಜು

Mar 25, 2022, 1:00 PM IST

ಉತ್ತರ ಪ್ರದೇಶದಲ್ಲಿ ದಾಖಲೆಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಯೋಗಿ ಆದಿತ್ಯನಾಥ್‌ ಅವರ ಪ್ರಮಾಣ ವಚನ ಸ್ವೀಕಾರ ಕಾರ‍್ಯಕ್ರಮ ಇಂದು ಸಂಜೆ 4 ಗಂಟೆಗೆ ಲಖನೌನಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಇಕಾನಾ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅದ್ಧೂರಿ ಕಾರ‍್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

ಒಂದೇ ಒಂದು ಸಲ ಬಂದು ಅಮ್ಮನನ್ನು ನೋಡಿ ಹೋಗಿ, ಸಿಎಂ ಯೋಗಿಗೆ ಅಕ್ಕನ ಮನವಿ!

ಒಟ್ಟು 403 ಕ್ಷೇತ್ರಗಳ ಪೈಕಿ 273 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ 37 ವರ್ಷಗಳ ರಾಜ್ಯದ ಇತಿಹಾಸದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೊದಲ ಆಡಳಿತಾರೂಢ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಹಲವು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸೇರಿದಂತೆ 15ಕ್ಕೂ ಹೆಚ್ಚು ಮುಖ್ಯಮಂತ್ರಿಗಳ ಹಲವು ಕ್ಷೇತ್ರಗಳ ಸಾಧಕರು ಮತ್ತು ಪಕ್ಷದ ಕಾರ‍್ಯಕರ್ತರು ಭಾಗಿಯಾಗಲಿದ್ದಾರೆ.