ಏಕಾಏಕಿಯಾಗಿ ಅಭ್ಯಾಸ ನಿಲ್ಲಿಸಿ ರಾಂಚಿಗೆ ತೆರಳಿದ ಧೋನಿ..!

ಏಕಾಏಕಿಯಾಗಿ ಅಭ್ಯಾಸ ನಿಲ್ಲಿಸಿ ರಾಂಚಿಗೆ ತೆರಳಿದ ಧೋನಿ..!

Suvarna News   | Asianet News
Published : Mar 16, 2020, 07:45 PM IST

ಇದೀಗ ಕೊರೋನಾ ವೈರಸ್ ಭೀತಿಯಿಂದಾಗಿ ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ ಧೋನಿ ದಿಢೀರ್ ಅಗಿ ತವರಿಗೆ ಮರಳಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.
 

ಚೆನ್ನೈ(ಮಾ.16): 2020ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್. ಧೋನಿ ಚೆನ್ನೈನಲ್ಲಿ ಕ್ರಿಕೆಟ್ ಅಭ್ಯಾಸ ಆರಂಭಿಸಿದ್ದರು. ಆದರೆ ಇದೀಗ ಇದ್ದಕ್ಕಿದ್ದಂತೆ ಬ್ಯಾಟ್ ಸೈಡಿಗಿಟ್ಟು ರಾಂಚಿಗೆ ಮರಳಿದ್ದಾರೆ.

ಹೌದು, 2019ರ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಸೋಲಿನ ಬಳಿಕ ಧೋನಿ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದರು. ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಧೋನಿ ಐಪಿಎಲ್‌ ಟೂರ್ನಿಯಲ್ಲಿ ಮಿಂಚಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. 

ಆದರೆ ಇದೀಗ ಕೊರೋನಾ ವೈರಸ್ ಭೀತಿಯಿಂದಾಗಿ ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ ಧೋನಿ ದಿಢೀರ್ ಅಗಿ ತವರಿಗೆ ಮರಳಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.