ಮೂರನೇ ವಾರದ ಐಪಿಎಲ್ ಟೂರ್ನಿ ಮುಕ್ತಾಯದ ವೇಳೆಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಸತತ ಸೋಲುಗಳಿಂದ ಕಂಗೆಟ್ಟಿರುವ ಕೆ.ಎಲ್. ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಬೆಂಗಳೂರು(ಅ.14): 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಿ ಮೂರು ವಾರಗಳು ಕಳೆದಿವೆ. ಮೂರನೇ ವಾರದಲ್ಲಿ ಅಂಕಪಟ್ಟಿಯಲ್ಲಿ ಹಲವಾರು ಬದಲಾವಣೆಗಳಾಗಿದ್ದು, ಎಲ್ಲಾ ತಂಡಗಳ ನಡುವೆ ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ.
ಹೌದು, ಮೂರನೇ ವಾರದ ಐಪಿಎಲ್ ಟೂರ್ನಿ ಮುಕ್ತಾಯದ ವೇಳೆಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಸತತ ಸೋಲುಗಳಿಂದ ಕಂಗೆಟ್ಟಿರುವ ಕೆ.ಎಲ್. ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಇನ್ನು ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೂರನೇ ವಾರದಲ್ಲಿ ಯಾವ ತಂಡದ ಪ್ರದರ್ಶನ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.