ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು, ಎರಡನೇ ಪಂದ್ಯದಲ್ಲಿ ಮುಗ್ಗರಿಸಿರು ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಹಳಿಗೆ ಮರಳಲು ಕಾತರಿಸುತ್ತಿದೆ. ಇನ್ನು ಪಂಜಾಬ್ ವಿರುದ್ಧ ಸೋಲಿನ ದವಡೆಯಿಂದ ಪಾರಾಗಿ ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ್ದ ಡೆಲ್ಲಿ ಜಯದ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ.
ಬೆಂಗಳೂರು(ಸೆ.25): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 7ನೇ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಎರಡು ಬಲಿಷ್ಠ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಸಾಕ್ಷಿಯಾಗಲಿದೆ.
ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು, ಎರಡನೇ ಪಂದ್ಯದಲ್ಲಿ ಮುಗ್ಗರಿಸಿರು ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಹಳಿಗೆ ಮರಳಲು ಕಾತರಿಸುತ್ತಿದೆ. ಇನ್ನು ಪಂಜಾಬ್ ವಿರುದ್ಧ ಸೋಲಿನ ದವಡೆಯಿಂದ ಪಾರಾಗಿ ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ್ದ ಡೆಲ್ಲಿ ಜಯದ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ನ ಬಲಾಬಲಗಳೇನು? ಉಭಯ ತಂಡಗಳ ಪೈಕಿ ಈ ಹಿಂದೆ ಯಾವ ತಂಡದ ಕೈ ಮೇಲಾಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.