IPL

IPL 2020 SRH ಎದುರು ಚೆನ್ನೈಗೆ ಬಲ ಹೆಚ್ಚಿಸಲಿದ್ದಾರೆ ಈ ಇಬ್ಬರು ಆಟಗಾರರು..!

Oct 2, 2020, 4:59 PM IST

ದುಬೈ(ಅ.02): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 14ನೇ ಪಂದ್ಯದಲ್ಲಿಂದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ.

ಐಪಿಎಲ್‌ ಇತಿಹಾಸದಲ್ಲೇ ಅತ್ಯಂತ ಸ್ಥಿರ ಪ್ರದರ್ಶನ ತೋರುತ್ತಾ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸ್ತುತ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು ಇಂದು  ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವಿನ ಕನವರಿಕೆಯಲ್ಲಿದೆ.

ಐಪಿಎಲ್ 2020: ಚೆನ್ನೈಗಿಂದು ಹೈದರಾಬಾದ್ ಸವಾಲು

ಇನ್ನು ಕಳೆದ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆದಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಅದೇ ಲಯವನ್ನು ಮುಂದುವರೆಸಿಕೊಂಡು ಹೋಗುವ ಲೆಕ್ಕಾಚಾರದಲ್ಲಿದೆ. ಹೇಗಿದೆ ಎರಡು ತಂಡಗಳ ಬಲಾ-ಬಲ? ತಂಡದಲ್ಲಿ ಏನೆಲ್ಲಾ ಬದಲಾವಣೆಯಾಗಬಹುದು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.