ಐಪಿಎಲ್ 2020: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್ ನೀಡುತ್ತಾ ರಾಜಸ್ಥಾನ ರಾಯಲ್ಸ್?

ಐಪಿಎಲ್ 2020: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್ ನೀಡುತ್ತಾ ರಾಜಸ್ಥಾನ ರಾಯಲ್ಸ್?

Suvarna News   | Asianet News
Published : Oct 14, 2020, 04:17 PM IST

ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ. ಈಗಾಗಲೇ ಡೆಲ್ಲಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 7ನೇ ಸ್ಥಾನದಲ್ಲಿದೆ.

ಬೆಂಗಳೂರು(ಅ.14): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ. ಈಗಾಗಲೇ ಡೆಲ್ಲಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 7ನೇ ಸ್ಥಾನದಲ್ಲಿದೆ.

ಡೆಲ್ಲಿ ತಂಡ ಕಳೆದ ಪಂದ್ಯದಲ್ಲಿ ಮುಗ್ಗರಿಸಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ ಹೈದರಾಬಾದ್ ಎದುರು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಎರಡು ತಂಡಗಳ ಬಲಾಬಲ ಹೇಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.