ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ನವೆಂಬರ್ 10ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಉತ್ತಮ ಫಾರ್ಮ್‌ನಲ್ಲಿರು ಸನ್‌ರೈಸರ್ಸ್ ಹೈದರಾಬಾದ್ ಗೆಲುವಿನ ನಾಗಾಲೋಟ ಮುಂದುವರೆಸಲು ಎದುರು ನೋಡುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೊಚ್ಚಲ ಐಪಿಎಲ್ ಫೈನಲ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದೆ.
ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಬಿಯ ಶೇಕ್ ಜಾಯೆದ್ ಮೈದಾನ ಆತಿಥ್ಯ ವಹಿಸಿದೆ.
ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ನವೆಂಬರ್ 10ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಉತ್ತಮ ಫಾರ್ಮ್‌ನಲ್ಲಿರು ಸನ್‌ರೈಸರ್ಸ್ ಹೈದರಾಬಾದ್ ಗೆಲುವಿನ ನಾಗಾಲೋಟ ಮುಂದುವರೆಸಲು ಎದುರು ನೋಡುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೊಚ್ಚಲ ಐಪಿಎಲ್ ಫೈನಲ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದೆ.
ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎರಡು ತಂಡಗಳಲ್ಲಿ ಏನಾದರೂ ಬದಲಾವಣೆಗಳಾಗಬಹುದಾ? ಎರಡು ತಂಡಗಳಲ್ಲಿನ ಆಟಗಾರರ ಪ್ರದರ್ಶನ ಹೇಗಿದೆ? ಈ ಹಿಂದಿನ ಮುಖಾಮುಖಿಯಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.