IPL

IPL 2020: ಧೋನಿ ನೇತೃತ್ವದ CSK ಪಡೆಗಿಂದು ಮಾಡು ಇಲ್ಲವೇ ಮಡಿ ಪಂದ್ಯ..!

Oct 13, 2020, 6:20 PM IST

ದುಬೈ(ಅ.13): ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ದುಬೈನಲ್ಲಿ ಕಾದಾಡಲಿದೆ. ಸಿಎಸ್‌ಕೆ ತಂಡಕ್ಕಿದು ಮಾಡು ಇಲ್ಲವೇ ಮಡಿ ಪಂದ್ಯ ಎನ್ನುವಂತಾಗಿದೆ.

ಹೌದು, ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಸಿಎಸ್‌ಕೆ ತಂಡ, ಆಡಿದ ಎಲ್ಲಾ 10 ಆವೃತ್ತಿಗಳಲ್ಲೂ ಪ್ಲೇ ಆಫ್ ಹಂತ ಪ್ರವೇಶಿಸಿದ ಏಕೈಕ ತಂಡ ಎನಿಸಿದೆ. ಆದರೆ ಈ ಬಾರಿ ಸಿಎಸ್‌ಕೆ ಪ್ಲೇ ಆಫ್ ಪ್ರವೇಶಿಸಲು ಶಕ್ತಿ ಮೀರಿ ಪ್ರಯತ್ನಿಸಬೇಕಾಗಿದೆ.

IPL 2020: ಧೋನಿ ಪಡೆ ಮೇಲೆ ಮತ್ತೆ ಸವಾರಿ ಮಾಡುತ್ತಾ ಹೈದರಾಬಾದ್..?

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ಪಡೆ ಇದುವರೆಗೂ 7 ಪಂದ್ಯಗಳನ್ನಾಡಿದ್ದು, 2 ಗೆಲುವು ಹಾಗೂ 5 ಸೋಲು ಕಂಡಿದೆ. ಹೀಗಾಗಿ ಪ್ಲೇ ಆಫ್ ಪ್ರವೇಶದ ಕನಸು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ ಸಿಎಸ್‌ಕೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.