ಮಂಗಳವಾರ(ಅ.14) ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಂಘಟಿತ ಪ್ರದರ್ಶನ ತೋರಿತು. ಈ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಸಂಕಷ್ಟಕ್ಕೆ ಸಿಲುಕಿದೆ.
ದುಬೈ(ಅ.14): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಕೊನೆಗೂ ಜಯದ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಧೋನಿ ಪಡೆ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಮಂಗಳವಾರ(ಅ.14) ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಂಘಟಿತ ಪ್ರದರ್ಶನ ತೋರಿತು. ಈ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಸಂಕಷ್ಟಕ್ಕೆ ಸಿಲುಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 6 ವಿಕೆಟ್ ಕಳೆದುಕೊಂಡು 167 ರನ್ ಕಲೆ ಹಾಕಿತ್ತು. ಇದಕ್ಕುತ್ತರವಾಗಿ ಸನ್‌ರೈಸರ್ಸ್ ಹೈದರಾಬಾದ್ 8 ವಿಕೆಟ್ ಕಳೆದುಕೊಂಡು 147 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದ ಹೈಲೈಟ್ಸ್ ಇಲ್ಲಿದೆ ನೋಡಿ.