IPLನಲ್ಲಿ RCB ಪರ ಅಬ್ಬರಿಸಲು ದೇವದತ್ ಪಡಿಕ್ಕಲ್ ರೆಡಿ

IPLನಲ್ಲಿ RCB ಪರ ಅಬ್ಬರಿಸಲು ದೇವದತ್ ಪಡಿಕ್ಕಲ್ ರೆಡಿ

Suvarna News   | Asianet News
Published : Sep 16, 2020, 06:10 PM IST

ಸಯ್ಯದ್ ಮುಷ್ತಾಕ್ ಅಲಿ, ವಿಜಯ್ ಹಜಾರೆ, ರಣಜಿ ಟ್ರೋಫಿ ಹೀಗೆ ದೇಸಿ ಟೂರ್ನಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಪಡಿಕ್ಕಲ್ ಅವರನ್ನು ಆರ್‌ಸಿಬಿ ಫ್ರಾಂಚೈಸಿ ಕೇವಲ 20 ಲಕ್ಷ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರು(ಸೆ.16): ಕರ್ನಾಟಕದ ಯುವ ಪ್ರತಿಭೆ ದೇವದತ್ ಪಡಿಕ್ಕಲ್ ಈ ಬಾರಿಯ ಐಪಿಎಲ್‌ನಲ್ಲಿ ಭರ್ಜರಿಯಾಗಿಯೇ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ದೇಸಿ ಕ್ರಿಕೆಟ್‌ನಲ್ಲಿ ರನ್ ಹೊಳೆ ಹರಿಸಿರುವ ಪಡಿಕ್ಕಲ್‌ ಇದೀಗ ಐಪಿಎಲ್‌ನಲ್ಲೂ ಅಂತಹದ್ದೇ ಪ್ರದರ್ಶನ ತೋರುವ ಕನವರಿಕೆಯಲ್ಲಿದ್ದಾರೆ.

ಸಯ್ಯದ್ ಮುಷ್ತಾಕ್ ಅಲಿ, ವಿಜಯ್ ಹಜಾರೆ, ರಣಜಿ ಟ್ರೋಫಿ ಹೀಗೆ ದೇಸಿ ಟೂರ್ನಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಪಡಿಕ್ಕಲ್ ಅವರನ್ನು ಆರ್‌ಸಿಬಿ ಫ್ರಾಂಚೈಸಿ ಕೇವಲ 20 ಲಕ್ಷ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದೀಗ ಆರ್‌ಸಿಬಿ ಪರ ಡೆಬ್ಯೂ ಮಾಡಲು ಪಡಿಕ್ಕಲ್ ರೆಡಿಯಾಗಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ