IPL 2020:  ಮುಂಬೈ ಎದುರು ಸಿಎಸ್‌ಕೆ ಮುಗ್ಗರಿಸಿದ್ದು ಹೇಗೆ?

IPL 2020: ಮುಂಬೈ ಎದುರು ಸಿಎಸ್‌ಕೆ ಮುಗ್ಗರಿಸಿದ್ದು ಹೇಗೆ?

Suvarna News   | Asianet News
Published : Oct 24, 2020, 01:20 PM IST

ಬ್ಯಾಟಿಂಗ್ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಆಘಾತಕಾರಿ ಸೋಲು ಅನುಭವಿಸಿದೆ. ಇದರೊಂದಿಗೆ ಉದ್ಘಾಟನಾ ಪಂದ್ಯದ ಸೋಲಿಗೆ ಮುಂಬೈ ಇಂಡಿಯನ್ಸ್ ಸೋಲಿಗೆ ಸೇಡು ತೀರಿಸಿಕೊಂಡಂತೆ ಆಗಿದೆ.

ಬೆಂಗಳೂರು(ಅ.24): ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು 10 ವಿಕೆಟ್ ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಈ ಮೂಲಕ ಧೋನಿ ಪಡೆ ಬಹುತೇಕ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದೆ.

ಹೌದು, ಬ್ಯಾಟಿಂಗ್ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಆಘಾತಕಾರಿ ಸೋಲು ಅನುಭವಿಸಿದೆ. ಇದರೊಂದಿಗೆ ಉದ್ಘಾಟನಾ ಪಂದ್ಯದ ಸೋಲಿಗೆ ಮುಂಬೈ ಇಂಡಿಯನ್ಸ್ ಸೋಲಿಗೆ ಸೇಡು ತೀರಿಸಿಕೊಂಡಂತೆ ಆಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಸ್ಯಾಮ್ ಕರ್ರನ್ ಏಕಾಂಗಿ ಹೋರಾಟ ನಡೆಸಿದರಾದರೂ ಅವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ಸಿಗಲಿಲ್ಲ. ಇನ್ನು ಉತ್ತಮ ಸಾಥ್ ಸಿಗಲಿಲ್ಲ. ಇನ್ನು ಸುಲಭ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ದಾಖಲಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.