IPL

IPL 2020: ಮುಂಬೈ ಎದುರು ಸನ್‌ರೈಸರ್ಸ್‌ಗಿಂದು ಮಾಡು ಇಲ್ಲವೇ ಮಡಿ ಪಂದ್ಯ..!

Nov 3, 2020, 4:28 PM IST

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಶಾರ್ಜಾ ಮೈದಾನ ಈ ಪಂದ್ಯಕ್ಕೆ ಆತಿಥ್ಯ ವಹಿಸಿದೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಮೊದಲ ಕ್ವಾಲಿಫೈಯರ್‌ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದು, ಜಯದ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಇವತ್ತಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಐಪಿಎಲ್ ಅಭಿಮಾನಿಗಳಿಗೆ ವಿಶೇಷ ಸಂದೇಶ ಕಳಿಸಿದ ಯೂನಿವರ್ಸೆಲ್ ಬಾಸ್..!

ವಾರ್ನರ್‌ ಪಡೆ ಇಂದಿನ(ನ.03) ಪಂದ್ಯ ಗೆದ್ದರಷ್ಟೇ ಪ್ಲೇ ಆಫ್‌ಗೆ ಅರ್ಹತೆಗಿಟ್ಟಿಸಿಕೊಳ್ಳಲಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ. ಈ ಲೀಗ್ ಹಂತದ ಕೊನೆಯ ಪಂದ್ಯ ಹೇಗಿರಲಿದೆ? 2 ತಂಡಗಳ ಸಂಭಾವ್ಯ ಆಟಗಾರರು ಯಾರು ಇರಬಹುದು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.