IPL

ಐಪಿಎಲ್ 2020: ಕಗಿಸೋ ರಬಾಡ ದಾಳಿಗೆ ನೆಲಕಚ್ಚಿದ RCB

Oct 6, 2020, 11:44 AM IST

ದುಬೈ(ಅ.06): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕನಸು ಭಗ್ನವಾಗಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ವಿರಾಟ್ ಕೊಹ್ಲಿ ಪಡೆ ಆಘಾತಕಾರಿ ಸೋಲು ಕಂಡಿದೆ.

ಹೌದು, ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡಕ್ಕೆ ಪೃಥ್ವಿ ಶಾ, ಶಿಖರ್ ಧವನ್ ಉತ್ತಮ ಆರಂಭ ಒದಗಿಸಿಕೊಟ್ಟರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸ್ಟೋನಿಸ್ ಹಾಗೂ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಮೂಲಕ ಡೆಲ್ಲಿ ತಂಡ 4 ವಿಕೆಟ್ ಕಳೆದುಕೊಂಡು 194 ರನ್ ಬಾರಿಸಿತ್ತು.

ಐಪಿಎಲ್ 2020: ಮುಂಬೈ-ರಾಜಸ್ಥಾನ ನಡುವಿಂದು ಹೈವೋಲ್ಟೇಜ್ ಪಂದ್ಯ..!

ಇನ್ನು ಸವಾಲಿನ ಮೊತ್ತ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭಿಕ ಆಘಾತ ಅನುಭವಿಸಿತು. ಆ ಬಳಿಕ ಕಗಿಸೋ ರಬಾಡ ಮಾರಕ ದಾಳಿಗೆ ತತ್ತರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್‌ ಗಳಿಸಷ್ಟೇ ಶಕ್ತವಾಯಿತು. ಡೆಲ್ಲಿ-ಬೆಂಗಳೂರು ನಡುವಿನ ಪಂದ್ಯದ ಹೈಲೈಟ್ಸ್ ಇಲ್ಲಿದೆ ನೋಡಿ.