IPL

ಶಾರ್ಜಾದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುತ್ತಾ ರಾಜಸ್ಥಾನ..?

Oct 9, 2020, 4:04 PM IST

ಶಾರ್ಜಾ(ಅ.09): ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಇಂದು ಶಾರ್ಜಾದಲ್ಲಿ ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಶಾರ್ಜಾದಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದು ಬೀಗಿದ್ದ ರಾಜಸ್ಥಾನ, ಆ ಬಳಿಕ ಮಂಕಾಗಿದೆ.

ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಸಂಜು ಸ್ಯಾಮ್ಸನ್ ಮೊದಲೆರಡು ಪಂದ್ಯಗಳಲ್ಲಿ ರನ್‌ ಮಳೆ ಹರಿಸಿದ್ದಾರೆ. ಹೀಗಾಗಿ ಇಂದು ಡೆಲ್ಲಿ ವಿರುದ್ಧವೂ ಅಂತಹದ್ದೇ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದ್ದಾರೆ.

IPL 2020: KXIP ಎದುರು ಆರೆಂಜ್ ಆರ್ಮಿಗೆ ಭರ್ಜರಿ ಜಯ

ಇನ್ನು ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಗಲೇ 4 ಗೆಲುವು ಹಾಗೂ 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು ಇಂದು ರಾಜಸ್ಥಾನ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.