IPL 2020: ಡೆಲ್ಲಿ ಕ್ಯಾಪಿಟಲ್ಸ್‌ ಮೇಲಿಂದು ಸವಾರಿ ಮಾಡುತ್ತಾ RCB..?

IPL 2020: ಡೆಲ್ಲಿ ಕ್ಯಾಪಿಟಲ್ಸ್‌ ಮೇಲಿಂದು ಸವಾರಿ ಮಾಡುತ್ತಾ RCB..?

Naveen Kodase   | Asianet News
Published : Oct 05, 2020, 03:15 PM IST

ಈಗಾಗಲೇ ಟೂರ್ನಿಯಲ್ಲಿ ಉಭಯ ತಂಡಗಳು ತಲಾ 4 ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಗೆಲುವು ಹಾಗೂ ಒಂದು ಪಂದ್ಯದಲ್ಲಿ ಸೋಲಿನ ಕಹಿಯುಂಡಿವೆ. ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.
 
ದುಬೈ(ಅ.05): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 19ನೇ ಪಂದ್ಯದಲ್ಲಿಂದು ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ಮುಖಾಮುಖಿಯಾಗುತ್ತಿದೆ.

ಈಗಾಗಲೇ ಟೂರ್ನಿಯಲ್ಲಿ ಉಭಯ ತಂಡಗಳು ತಲಾ 4 ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಗೆಲುವು ಹಾಗೂ ಒಂದು ಪಂದ್ಯದಲ್ಲಿ ಸೋಲಿನ ಕಹಿಯುಂಡಿವೆ. ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.

ಈ ಹಿಂದಿನ ಪಂದ್ಯಗಳಲ್ಲಿ ಉಭಯ ತಂಡಗಳ ನಾಯಕರು ಅಜೇಯ ಬ್ಯಾಟಿಂಗ್ ನಡೆಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂದಿನ ಪಂದ್ಯ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.