IPL

IPL 2020: ಬಲಿಷ್ಠ ಡೆಲ್ಲಿ ಮಣಿಸಿ ಪ್ಲೇ ಆಫ್‌ಗೇರುತ್ತಾ ಆರ್‌ಸಿಬಿ..?

Nov 2, 2020, 4:25 PM IST

ಬೆಂಗಳೂರು(ನ.02): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್‌ ಹಂತದ ಕೊನೆಯ 2 ಪಂದ್ಯಗಳು ಬಾಕಿ ಇದ್ದರೂ ಇನ್ನೂ ಪ್ಲೇ ಆಫ್‌ ಪ್ರವೇಶಿಸಲು 3 ಸ್ಥಾನಗಳಿಗಾಗಿ 4 ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ.

ಸೋಮವಾರ(ನ.02)ದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಗೆದ್ದಂತಹ ತಂಡ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಅರ್ಹತೆಗಿಟ್ಟಿಸಿಕೊಳ್ಳಲಿದೆ. 

ಆರ್‌ಸಿಬಿ ಗೆಲುವಿಗೆ ಅಭಿಮಾನಿಗಳ ಅಭಿಮಾನ ವೈರಲ್..!

ಇಂದಿನ ಪಂದ್ಯದಲ್ಲಿ ಮುಗ್ಗರಿಸುವ ತಂಡ ಪ್ಲೇ ಆಫ್‌ಗೇರುವ ಸಾಧ್ಯತೆಯಿದೆಯಾ? ಇಂದಿನ ಪಂದ್ಯಗಳಲ್ಲಿ ಉಭಯ ತಂಡಗಳಲ್ಲಿ ಏನಾದರೂ ಬದಲಾವಣೆಗಳಾಬಹುದಾ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.