IPL 2020: RCB ಹಾಗೂ ಡೆಲ್ಲಿ ಗೆಲುವಿನ ಹೀರೋ ಯಾರು..?

IPL 2020: RCB ಹಾಗೂ ಡೆಲ್ಲಿ ಗೆಲುವಿನ ಹೀರೋ ಯಾರು..?

Suvarna News   | Asianet News
Published : Oct 04, 2020, 02:17 PM IST

ಶನಿವಾರ ನಡೆದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಪಡೆ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇನ್ನು ಶಾರ್ಜಾದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಅಕ್ಷರಶಃ ರನ್ ಮಳೆಯೇ ಹರಿದಿದೆ.

ಬೆಂಗಳೂರು(ಅ.04): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಸುಲಭ ಗೆಲುವನ್ನು ದಾಖಲಿಸಿದ್ದರೆ, ಮತ್ತೊಂದು ಪಂದ್ಯದಲ್ಲಿ ಕೆಕೆಆರ್ ವಿರುದ್ದ ಡೆಲ್ಲಿ ಗೆಲುವಿನ ಕೇಕೆ ಹಾಕಿದೆ.

ಹೌದು, ಶನಿವಾರ ನಡೆದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಪಡೆ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇನ್ನು ಶಾರ್ಜಾದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಅಕ್ಷರಶಃ ರನ್ ಮಳೆಯೇ ಹರಿದಿದೆ.

ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್, ಪೃಥ್ವಿ ಶಾ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಆರ್‌ಸಿಬಿ ತಂಡದ ಪರ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಈ ಎರಡು ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.