IPL 2020: ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಎಡವಿದ್ದೆಲ್ಲಿ..?

IPL 2020: ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಎಡವಿದ್ದೆಲ್ಲಿ..?

Naveen Kodase   | Asianet News
Published : Nov 07, 2020, 05:29 PM IST

ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬ್ಯಾಟ್ಸ್‌ಮನ್‌ ದಯಾನೀಯ ವೈಫಲ್ಯದಿಂದಾಗಿ ಪಂದ್ಯ ಆರ್‌ಸಿಬಿಯಿಂದ ಕೈಜಾರಿ ಹೋಯಿತು. ಬ್ಯಾಟಿಂಗ್‌ನಲ್ಲಿ ಫಿಂಚ್ ಹಾಗೂ ಎಬಿ ಡಿವಿಲಿಯರ್ಸ್ ಹೊರತುಪಡಿಸಿ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಪ್ರದರ್ಶನ ತೋರಲು ಯಶಸ್ವಿಯಾಗಲಿಲ್ಲ.

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು 6 ವಿಕೆಟ್‌ಗಳ ಸೋಲು ಕಾಣುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಅಂತ್ಯವಾಗಿದೆ.

ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬ್ಯಾಟ್ಸ್‌ಮನ್‌ ದಯಾನೀಯ ವೈಫಲ್ಯದಿಂದಾಗಿ ಪಂದ್ಯ ಆರ್‌ಸಿಬಿಯಿಂದ ಕೈಜಾರಿ ಹೋಯಿತು. ಬ್ಯಾಟಿಂಗ್‌ನಲ್ಲಿ ಫಿಂಚ್ ಹಾಗೂ ಎಬಿ ಡಿವಿಲಿಯರ್ಸ್ ಹೊರತುಪಡಿಸಿ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಪ್ರದರ್ಶನ ತೋರಲು ಯಶಸ್ವಿಯಾಗಲಿಲ್ಲ.

ಹೈದರಾಬಾದ್ ವಿರುದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಮುಗ್ಗರಿಸಿದ್ದೆಲ್ಲಿ?, ಆರೆಂಜ್ ಆರ್ಮಿ ಎದುರು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಶರಣಾಗಲು ಏನು ಕಾರಣ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.