RCB ವಿರುದ್ಧ ಪಂಜಾಬ್ ದಿಗ್ವಿಜಯ: ವಿರಾಟ್ ಪಡೆ ಎಡವಿದ್ದೆಲ್ಲಿ..?

RCB ವಿರುದ್ಧ ಪಂಜಾಬ್ ದಿಗ್ವಿಜಯ: ವಿರಾಟ್ ಪಡೆ ಎಡವಿದ್ದೆಲ್ಲಿ..?

Suvarna News   | Asianet News
Published : Sep 25, 2020, 03:06 PM ISTUpdated : Sep 25, 2020, 03:07 PM IST

ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ನಾಯಕ ಕೆ.ಎಲ್. ರಾಹುಲ್ ಸಿಡಿಲಬ್ಬರದ ಶತಕದ ನೆರವಿನಿಂದ 206 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು. ಬೃಹತ್ ಮೊತ್ತ ಗುರಿ ಬೆನ್ನತ್ತಿದ ಆರ್‌ಸಿಬಿ ಹೀನಾಯ ಸೋಲು ಕಂಡಿತು

ದುಬೈ(ಸೆ.25): ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ನಾಯಕನ ಆಟವಾಡಿದ ರಾಹುಲ್ ಪಂದ್ಯದ ದಿಕ್ಕನ್ನೇ ಬದಲಿಸಿ ಬಿಟ್ಟರು.

ಹೌದು, ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ನಾಯಕ ಕೆ.ಎಲ್. ರಾಹುಲ್ ಸಿಡಿಲಬ್ಬರದ ಶತಕದ ನೆರವಿನಿಂದ 206 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು. ಬೃಹತ್ ಮೊತ್ತ ಗುರಿ ಬೆನ್ನತ್ತಿದ ಆರ್‌ಸಿಬಿ ಹೀನಾಯ ಸೋಲು ಕಂಡಿತು.

ಈ ಪಂದ್ಯದಲ್ಲಿ ಕಳಪೆ ಕ್ಷೇತ್ರರಕ್ಷಣೆ ಹಾಗೂ ದುರ್ಬಲ ಬೌಲಿಂಗ್ ಆರ್‌ಸಿಬಿ ಕೈಯಿಂದ ಪಂದ್ಯ ಕೈಜಾರುವಂತೆ ಮಾಡಿತು. ಈ ಪಂದ್ಯದಲ್ಲಿ ಆರ್‌ಸಿಬಿ ಪಂದ್ಯ ಕೈಚೆಲ್ಲಿದ್ದೆಲ್ಲಿ? ಪಂದ್ಯದ ಟರ್ನಿಂಗ್ ಪಾಯಿಂಟ್ ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.