IPL

IPL 2020: ಕೆಕೆಆರ್ ಮೇಲೆ ಸವಾರಿ ಮಾಡುತ್ತಾ ಆರ್‌ಸಿಬಿ..?

Oct 21, 2020, 5:41 PM IST

ಅಬುಧಾಬಿ(ಅ.21): ಮೂರು ದಿನಗಳ ವಿಶ್ರಾಂತಿಯ ಬಳಿಕ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು(ಅ.21) ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಕೋಲ್ಕತ ನೈಟ್‌ ರೈಡರ್ಸ್ ತಂಡವನ್ನು ಎದುರಿಸಲಿದೆ.

ಈಗಾಗಲೇ ವಿರಾಟ್ ಕೊಹ್ಲಿ ಬಳಗ ಮೊದಲ ಸುತ್ತಿನಲ್ಲಿ ಕೆಕೆಆರ್ ವಿರುದ್ಧ 82 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಇದೀಗ ಆರ್‌ಸಿಬಿ ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. 

ಗಾಯದ ಮೇಲೆ ಮತ್ತೊಂದು ಬರೆ; CSK ಸ್ಟಾರ್ ಆಲ್ರೌಂಡರ್ ಟೂರ್ನಿಯಿಂದಲೇ ಔಟ್...!

ಇನ್ನು ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೆಕೆಆರ್ ಇಂದು ಅಬುಧಾಬಿಯಲ್ಲೂ ಅಬ್ಬರಿಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.