ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

Published : Sep 09, 2023, 12:04 PM IST

ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಮಂಗಳೂರು ವಿವಿ ಕಾಲೇಜಿಗೆ ಮುತ್ತಿಗೆ ಹಾಕಿದ್ದಾರೆ.
 

ಮಂಗಳೂರು: ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ(DR.shamsul Islams)ಉಪನ್ಯಾಸಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಉಪನ್ಯಾಸ ವಿರೋಧಿಸಿ ಮಂಗಳೂರು ವಿವಿ(Mangaluru University) ಕಾಲೇಜಿಗೆ  ABVP ಮುತ್ತಿಗೆ ಹಾಕಲು ಯತ್ನಿಸಿದೆ. ಹಂಪನಕಟ್ಟೆ ಬಳಿಯ ಮಂಗಳೂರು ವಿವಿಗೆ ಮುತ್ತಿಗೆ ಹಾಕಲು  ಯತ್ನಿಸಲಾಗಿದೆ. ಗೇಟ್ ಬಳಿ ABVP ಕಾರ್ಯಕರ್ತರನ್ನು ಪೊಲೀಸರು(Police) ತಡೆದಿದ್ದಾರೆ. ABVP ಕಾರ್ಯಕರ್ತರು, ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆದಿದೆ. ಅಲ್ಲದೇ ABVP ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಶಂಸುಲ್ ಗೋ ಬ್ಯಾಕ್ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಈಗಾಗಲೇ ಬೇರೆ ದಾರಿ ಮೂಲಕ ಡಾ.ಶಂಸುಲ್ ಕಾಲೇಜು ಆವರಣ ಪ್ರವೇಶಿಸಿದ್ದಾರೆ. ಕಾಲೇಜಿನ ಒಳಗೆ ನಡೆಯುವ ಕಾರ್ಯಕ್ರಮ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿರೋಧದ ನಡುವೆಯೂ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 

ಇದನ್ನೂ ವೀಕ್ಷಿಸಿ:  News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more