ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ(Lorry) ಹಿಂಬದಿಯಿಂದ ಕಾರು(Car) ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರು ವಿಜಯಪುರ(vijayapura) ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರೆಸಾಲವಾಡಗಿ ಗ್ರಾಮದವರು ಎಂದು ತಿಳಿದುಬಂದಿದೆ. ಸಂಗನಬಸಪ್ಪ, ಪತ್ನಿ ರೇಖಾ , ಪುತ್ರ ಅಗಸ್ತ್ಯ ಸಂಬಂಧಿಕ ಭೀಮಾಶಂಕರ್ ಸ್ಥಳದಲ್ಲಿ ಮೃತಪಟ್ಟರೇ, ಮಧುಸೂದನ್ ಎಂಬುವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ 11ಕ್ಕೆ ಮನೆಯಿಂದ ಕಾರಿನಲ್ಲಿ ಮೃತರು ಪ್ರಯಾಣ ಬೆಳೆಸಿದ್ದಾರೆ. ಇವರು ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ದರು.ಸದ್ಯ ಚಿತ್ರದುರ್ಗದತ್ತ ಪ್ರಯಾಣ ಬೆಳೆಸಿದ್ದರು. ಮಧುಸೂದನ್ ಎಂಬುವರು ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಕೋಲಾರದ ಕೆಜಿಎಫ್ ಮೂಲದವರಾಗಿದ್ದಾರೆ. ಪಿಎಸ್‌ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದರು. ಇವರು ಮೃತ ಭೀಮಾಶಂಕರ್ ಸ್ನೇಹಿತರಾಗಿದ್ದರು.
ಇದನ್ನೂ ವೀಕ್ಷಿಸಿ: ಫುಡ್, ಫನ್ ಮತ್ತು ಫ್ಯಾಷನ್ ಫೆಸ್ಟಿವಲ್‌ಗೆ ಇಂದೇ ಕೊನೆ ದಿನ: ಬನ್ನಿ ಭಾಗವಹಿಸಿ..ವೀಕೆಂಡ್‌ನಲ್ಲಿ ಸಂಭ್ರಮಿಸಿ