Jan 15, 2020, 2:56 PM IST
ಮಂಗಳೂರು(ಜ.15): ಕರಾವಳಿಯಲ್ಲಿ ಮುಸ್ಲಿಂ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಗೆ ಮುಂದಾಗಿವೆ. ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು, 1 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಮುತ್ತಲೂ, ಮಂಗಳೂರು ನಗರದಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಕಾನೂನು ಸುವ್ಯವಸ್ಥಾ ವಿಭಾಗದ ಅಮರ್ ಕುಮಾರ್ ಪಾಂಡೆ ಅವರು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಮೂರು ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದ್ದು, ಮೈದಾನದ ಸುತ್ತಲೂ ಭದ್ರತೆ ಹೆಚ್ಚಿಸಲಾಗಿದೆ. ನಗರದೆಲ್ಲೆಡೆ ಖಾಕಿ ಕಣ್ಗಾವಲು ಇರಿಸಲಾಗಿದೆ. ಹಲವು ಕಡೆ ಸಂಚಾರ ಮಾರ್ಗಗಗಳನ್ನು ಬದಲಾಯಿಸಲಾಗಿದೆ.
ಮಂಗಳೂರಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ.
10 ಜಿಲ್ಲೆಗಳಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 3 ಸಾವಿರಕ್ಕೂ ಹೆಚ್ಚು ಪೊಲೀಸರು ಆಗಮಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ.