ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

May 31, 2020, 2:40 PM IST

ಬೆಂಗಳೂರು(ಮೇ.31): ಲಾಕ್‌ಡೌನ್‌ ಸಂದರ್ಭದಲ್ಲಿ ಎಣ್ಣೆ ಬೀಜ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನವನ್ನ ನೀಡಲಾಗಿದೆ ಎಂದು ಕೃಷಿ ಸಚಿವ ಬಿ. ಸಿ.ಪಾಟೀಲ ಅವರು ಹೇಳಿದ್ದಾರೆ. ಈಗಾಗಲೇ ಮುಂಗಾರು ಪ್ರಾರಂಭಗೊಳ್ಳಲಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಎಣ್ಣೆ ಬೀಜಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ಈಗಾಗಲೇ ಸರ್ಕಾರದಿಂದ ಸಬ್ಸಿಡಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ತೊಂದೆರೆಗೊಳಗಾದ ರೈತರಿಗೆ ಕೃಷಿ ಇಲಾಖೆಯಿಂದ ನೆರವು ನೀಡಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ 30 ಜಿಲ್ಲೆಗಳಲ್ಲಿ ಎಣ್ಣೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.