Karwar: 'ಭಾರತದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರು': ಏಕಾಂಗಿ ಸೈಕಲ್ ಯಾತ್ರೆ ಮೂಲಕ ಯುವತಿಯ ಸಂದೇಶ

Dec 17, 2022, 11:48 AM IST

ದೇಶದ ವಿವಿಧೆಡೆ ನಡೆಯುತ್ತಿದ್ದ ಕೆಲವೊಂದು ಅಮಾನವೀಯ ಘಟನೆಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತಾಗಿದೆ. ಪ್ರತಿನಿತ್ಯ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಇತರ ಮಹಿಳೆಯರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ಆದರೆ, ಭಾರತ ದೇಶ ಮಹಿಳೆಯರಿಗೆ ಸುರಕ್ಷಿತವಾಗಿದೆ ಅನ್ನೋದನ್ನು ತೋರಿಸಿಕೊಡುವ ನಿಟ್ಟಿನಲ್ಲಿ ಯುವತಿಯೋರ್ವಳು ಏಕಾಂಗಿಯಾಗಿ ಸೈಕಲ್ ಮೇಲೆ ದೇಶ ಪರ್ಯಟನೆಗೆ ಹೊರಟಿದ್ದಾರೆ. ಬರೋಬ್ಬರಿ ಒಟ್ಟು 20 ಸಾವಿರ ಕಿ.ಮೀ. ಸೈಕಲ್ ಯಾತ್ರೆಯನ್ನು ಮಾಡುವ ಮೂಲಕ ನೋಡುಗರ ಹುಬ್ಬೇರುವಂತೆ ಮಾಡುತ್ತಿದ್ದಾಳೆ. 

PSI Recruitment Scam: ಬೇಲ್‌ ಪಡೆದು ಬಂದ ಕಾಂಗ್ರೆಸ್‌ ಮುಖಂಡನಿಗೆ ಭರ್ಜರಿ ಸ್ವಾಗತ!