Jan 27, 2022, 1:30 PM IST
ಬೆಂಗಳೂರು (ಜ. 27): ಕೊರೋನಾ ಸೋಂಕಿತರ ಚಿಕಿತ್ಸೆಗೆ (Covid 19) ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಖಾಲಿ ಇದ್ದರೂ, ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸ್ವತಃ ಸರ್ಕಾರವೇ ಶುಲ್ಕ ಪಾವತಿಸಿ ಚಿಕಿತ್ಸೆ ಕೊಡಿಸುತ್ತಿದೆ. ಬಿಬಿಎಂಪಿ ಖಾಸಗಿ ಆಸ್ಪತ್ರೆಗೆ ಪ್ರತಿದಿನ ₹10ಲಕ್ಷ ಖರ್ಚು ಮಾಡುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 1200ಕ್ಕೂ ಹೆಚ್ಚು ಬೆಡ್ ಖಾಲಿ ಇದ್ದರೂ ಖಾಸಗಿ ಆಸ್ಪತ್ರೆಗಳಿಗೆ ಡಿಮ್ಯಾಂಡ್ ಹೆಚ್ಚಿದೆ. ಖಾಸಗಿ ಆಸ್ಪತ್ರೆ ಶುಲ್ಕ ಪಾವತಿಸುವ ಮೂಲಕ ಬಿಬಿಎಂಪಿ ಅನಗತ್ಯ ಖರ್ಚು ಮಾಡುತ್ತಿದೆ.
ಇದನ್ನೂ ಓದಿ: Covid 3rd Wave: ರಾಜ್ಯದಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿ ಕೊರೋನಾ ಸೋಂಕು
ಕೊರೋನಾ ಸೋಂಕಿನ ಸಂದರ್ಭದಲ್ಲಿ(ಈ ಹಿಂದಿನ ಎರಡು ಅಲೆಗಳಲ್ಲಿ) ಒಮ್ಮೆಗೆ ಆಸ್ಪತ್ರೆ ದಾಖಲಾತಿಗಳು ಹೆಚ್ಚಳವಾಗಿ ಹಾಸಿಗೆಗಳ ಅಭಾವ ಸೃಷ್ಟಿಯಾಗಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಸರ್ಕಾರಿ ಕೋಟಾದಡಿ(ಚಿಕಿತ್ಸೆ ವೆಚ್ಚ ಪಾವತಿಸಿ) ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು.
ಈ ಹಿಂದೆ ಸರ್ಕಾರಿ ಆಸ್ಪತೆಗಳಲ್ಲಿ ಹಾಸಿಗೆಗಳು ಭರ್ತಿಯಾದ ಬಳಿಕವಷ್ಟೇ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಸೋಂಕಿತರಿಗೆ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಸೋಂಕಿನ ತೀವ್ರತೆ ಕಡಿಮೆ ಇದ್ದು, ಆಸ್ಪತ್ರೆ ದಾಖಲಾತಿ ಸಾಕಷ್ಟುಕಡಿಮೆ ಇದೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಸಾಕಷ್ಟುಹಾಸಿಗೆಗಳು ಖಾಲಿ ಇವೆ. ಆದರೂ, ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರಿ ಕೋಟಾ ಹಾಸಿಗೆಗಳನ್ನು ನೀಡಲಾರಂಭಿಸಿದೆ.