Aug 16, 2023, 3:21 PM IST
ಕರ್ನಾಟಕ ಅತೀದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ವಿಭಜನೆ ಮಾಡುವಂತೆ ಮತ್ತೊಮ್ಮೆ ಒತ್ತಾಯಗಳು ಕೇಳಿ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿಯವರು ಈ ಹಿಂದೆ ಜಿಲ್ಲೆ ವಿಭಜನೆ ಬಗ್ಗೆ ಮಹತ್ವದ ಸುಳಿವು ನೀಡಿದ್ದರು. ಸುಮಾರು 13,400 ಚದರ ಕಿಲೋಮೀಟರ್ ಭೂಪ್ರದೇಶವನ್ನು ಒಳಗೊಂಡಿರುವ, ಎರಡು ಲೋಕಸಭಾ ಕ್ಷೇತ್ರಗಳು ಮತ್ತು 18 ವಿಧಾನಸಭಾ ಕ್ಷೇತ್ರಗಳ ಭಾಗವನ್ನು ವ್ಯಾಪಿಸಿರುವ ಕರ್ನಾಟಕದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ಮೂರು ಭಾಗಗಳಾಗಿ ಮಾಡಲು ಒತ್ತಾಯಿಸಲಾಗಿದೆ. ಬೆಳಗಾವಿ ಜಿಲ್ಲೆಯನ್ನು ಗೋಕಾಕ್, ಚಿಕ್ಕೋಡಿ ಹಾಗೂ ಬೆಳಗಾವಿ ಎಂಬ ಮೂರು ಜಿಲ್ಲೆಗಳನ್ನಾಗಿ ಮಾಡಲು ಒತ್ತಡವಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸಚಿವರು ಮತ್ತು ಶಾಸಕರ ಜೊತೆಗೆ ಇತ್ತೀಚೆಗೆ ಸಭೆ ನಡೆಸಿ ಮಾತುಕತೆ ಮಾಡಿದ್ದಾರೆ.