ಬೆಂಗಳೂರಿಗರೇ ಗಮನಿಸಿ... ನಾಳೆ ನಗರದಲ್ಲಿ ಆಟೋ ಸೇವೆ ಬಂದ್‌..!

Mar 19, 2023, 12:15 PM IST

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ನಾಳೆ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ‌ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ  ಒತ್ತಾಯ ಮಾಡಿವೆ. ಈ ಹಿನ್ನಲೆ ನಾಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ.ಒಟ್ಟೂ 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ನಾಳೆ ಬಂದ್ ಆಗುತ್ತೆ ಎಂದು ಹೇಳಲಾಗುತ್ತಿದೆ.ಅದಲ್ಲದೆ ಬೆಳಗ್ಗೆ 11ಗಂಟೆಗೆ ರೇಸ್​​​ ಕೋರ್ಸ್ ರಸ್ತೆಯಲ್ಲಿರುವ​ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ಪ್ಲಾನ್​ ಮಾಡಲಾಗಿದೆ.