ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ.
ಬೆಂಗಳೂರು (ಮೇ.21): ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಹಲವು ಹಾನಿ ಸಂಭವಿಸಿದೆ ಟ್ರಾಫಿಕ್ ಜಾಮ್ ಆಗಿದ್ದು ಸಂಚಾರಕ್ಕೆ ಕಷ್ಟವಾಗಿದೆ. ನಗರದಲ್ಲಿ ಕಾರು, ಬಸ್ ಮೇಲೆ ಮರ ಬಿದ್ದಿದ್ದು ಯಾವುದೇ ಜೀವ ಹಾನಿಯಾಗಿಲ್ಲ.