Feb 2, 2023, 4:17 PM IST
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆಯ ತುಂಬ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ. ಕೆಂಗಲ್ ಗ್ರಾಮದಿಂದ ದಶವಾರ ಗ್ರಾಮದವರೆಗೂ ಸಂಪರ್ಕ ಕಲ್ಪಿಸುವ ಈ ರಸ್ತೆ ಹದಗೆಟ್ಟು ಐದು ವರ್ಷಗಳ ಆಗಿದೆ. ರಸ್ತೆ ಅಭಿವೃದ್ದಿಗಾಗಿ ಈಗಾಗಲೇ ಸರ್ಕಾರದಿಂದ 28 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ತಾಲೂಕಿನಲ್ಲಿ ಪ್ರತಿಯೊಂದು ಕಾಮಗಾರಿ ವಿಚಾರವಾಗಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಕಾಮಗಾರಿಗಳು ನಡೆಯುತ್ತಿಲ್ಲ. ಹೀಗಾಗಿ ಅನುದಾನ ಬಿಡುಗಡೆಯಾಗಿದ್ರು ಕಾಮಗಾರಿ ಆರಂಭಿಸುತ್ತಿಲ್ಲ.
BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿ ...