BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

Published : Feb 02, 2023, 03:48 PM ISTUpdated : Feb 02, 2023, 04:23 PM IST

ಸಾರಿಗೆ ಸೌಲಭ್ಯವಿಲ್ಲದೆ 14 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಘಟನೆ, ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿಯಲ್ಲಿ ನಡೆದಿದೆ.

ಹೆರೂರು ಹಾಡಿಯಲ್ಲಿ 120ಕ್ಕೂ ಕುಟುಂಬಗಳಿವೆ. ಇಲ್ಲಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 8 ಕಿಲೋ ಮೀಟರ್ ದೂರದಲ್ಲಿರುವ ಬಸವನಹಳ್ಳಿ, ಕಾನ್‍ಬೈಲು ಮತ್ತು ಏಳನೇ ಹೊಸಕೋಟೆ ಶಾಲೆಗಳಿಗೆ ಹೋಗಬೇಕು. ಶಾಲೆಗೆ ಹೋಗಬೇಕೆಂದರೆ ನಾಲ್ಕು ಕಿಲೋ ಮೀಟರ್ ಉದ್ದದ ವನ್ಯಜೀವಿ ಕಾಡಿನಲ್ಲಿ ನಡೆದು ಸಾಗಬೇಕು. ನಿತ್ಯ ಆನೆ, ಹುಲಿಗಳು ಓಡಾಡುವ ಈ ಕಾಡಿನಲ್ಲಿ ನಡೆದು ಶಾಲೆಗೆ ಹೋಗುವುದಾದರೂ ಹೇಗೆ ಎನ್ನುವ ದೊಡ್ಡ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನಾಲ್ಕು ಕಿಲೋ ಮೀಟರ್ ನಡೆಯುವ ಜೊತೆಗೆ ಇನ್ನೆರಡು ಕಿಲೋ ಮೀಟರ್ ಮಾಮೂಲಿ ರಸ್ತೆಯಲ್ಲಿಯೇ ನಡೆಯಬೇಕು. ಹೀಗಾಗಿ ಬಸವನಹಳ್ಳಿ ಶಾಲೆಗೆ ಹೋಗುತ್ತಿದ್ದ 12 ವಿದ್ಯಾರ್ಥಿಗಳು ಶಾಲೆಗೆ ದಾಖಲಾಗಿದ್ದಷ್ಟೇ ಬಾಕಿ, ಮತ್ತೆ ಆ ಶಾಲೆಯತ್ತ ತಿರುಗಿ ನೋಡಿಲ್ಲ. ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಇಲ್ಲದೆ ಇರುವುದರಿಂದ ಯಾರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮುಂದೆ ಬರುತ್ತಿಲ್ಲ. ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಕುಟುಂಬಗಳು ಆಗಿರುವುದರಿಂದ ಆಟೋಗಳಿಗೆ ಹಣ ನೀಡಿ ಶಾಲೆಗೆ ಕಳುಹಿಸುವುದಿಲ್ಲ. ಸಾರಿಗೆ ಸೌಲಭ್ಯದ ಕೊರತೆಯಿಂದ ಆ ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗುಳಿಯುವಂತೆ ಆಗಿರುವುದು ವಿಪರ್ಯಾಸದ ಸಂಗತಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more