BIG3: ಹೇಮಾವತಿ ನದಿಗೆ ಕಾಫಿ ಪಲ್ಪರಿಂಗ್ ವೇಸ್ಟ್ ನೀರು: ಸ್ಥಳೀಯರು ಆಕ್ರೋಶ

Feb 10, 2023, 5:43 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ, ಸಕಲೇಶಪುರ ಭಾಗದ ಕಾಫಿ ಬೆಳೆಗಾರರು ಕಾಫಿಯನ್ನು ಪಲ್ಪರಿಂಗ್ ಮಾಡಿ, ವೇಸ್ಟ್ ನೀರನ್ನು ಹೇಮಾವತಿ ನದಿಗೆ ಬಿಡುತ್ತಿದ್ದಾರೆ. ಮಳೆಗಾಲದಲ್ಲಿ ಮಣ್ಣು ಮಿಶ್ರಿತ ಕೆಂಪು ನೀರು ಹೋದ್ರೆ, ಬೇಸಿಗೆಯಲ್ಲಿ ನೀರಿಗೆ ಬಣ್ಣವಿಲ್ಲದಿದ್ದರೂ ಶುಭ್ರವಾಗಿ ಹರಿಯುತ್ತಾಳೆ. ಆದರೆ ಕಾಫಿತೋಟದ ಮಾಲೀಕರು ಕಾಫಿ ಪಲ್ಪರಿಂಗ್ ನೀರನ್ನು ನೇರವಾಗಿ ಹೇಮಾವತಿ ನದಿಗೆ ಬಿಡುತ್ತಿರೋದರಿಂದ ನದಿ ನೀರೆಲ್ಲಾ ಕಪ್ಪು ಬಣ್ಣಕ್ಕೆ ತಿರುಗಿದೆ. ಜೊತೆಗೆ ದುರ್ವಾಸನೆ ಬೀರುತ್ತಿದೆ. ಇದು ಸ್ಥಳೀಯರು ಆಕ್ರೋಶಕ್ಕೂ ಕಾರಣವಾಗಿದ್ದು, ಕಾಫಿ ಪಲ್ಪರ್ ಮಾಡಿದ ನೀರನ್ನು ಇಂಗು ಗುಂಡಿ ಮೂಲಕ ಇಂಗಿಸಬೇಕು. ಆದ್ರೆ ಎಸ್ಟೇಟ್ ಮಾಲಿಕರು ಕಾಫಿ ಪಿಲ್ಪರ್ ಮಾಡಿದ ನೀರನ್ನು ಇಂಗಿಸದೇ ನೇರವಾಗಿ ನದಿಗೆ ಬಿಡ್ತಿದ್ದಾರಂತೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಿ, ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.