ಬಾಲಕಿಯೊಬ್ಬಳಿಗೆ ಅರಿಶಿನ, ಕುಂಕುಮ, ನಿಂಬೆಹಣ್ಣು ಹಾಕಿ ಮಾಂತ್ರಿಕರೊಬ್ಬರು ಕ್ಷುದ್ರ ಪೂಜೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರು (ಜೂ. 20): ಬಾಲಕಿಯೊಬ್ಬಳಿಗೆ ಅರಿಶಿನ, ಕುಂಕುಮ, ನಿಂಬೆಹಣ್ಣು ಹಾಕಿ ಮಾಂತ್ರಿಕರೊಬ್ಬರು ಕ್ಷುದ್ರ ಪೂಜೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಬಾಲಕಿಯನ್ನು ನರಬಲಿ ಕೊಡಲು ಸಿದ್ಧತೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಬಾಲಕಿಯನ್ನು ರಕ್ಷಿಸಿದ್ದಾರೆ. ಮಾಂತ್ರಿಕ ಪರಾರಿಯಾಗಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.